Salvador
Jesus é o Salvador do mundo. Desde a manjedoura até a cruz e a ressurreição, toda a Escritura aponta para Aquele que veio buscar e salvar o que se havia perdido.
O Salvador nasceu
Na plenitude dos tempos, Deus enviou seu Filho ao mundo. O anjo declarou: 'Hoje vos nasceu um Salvador, que é Cristo, o Senhor.'
ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.
ಅವರು ದೇವರ ಸ್ವರೂಪವಾಗಿದ್ದರೂ,
ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,
ತಮ್ಮನ್ನು ತಾವೇ ಬರಿದುಮಾಡಿಕೊಂಡು
ಗುಲಾಮನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದರು.
ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ
ತಮ್ಮನ್ನು ತಾವೇ ತಗ್ಗಿಸಿಕೊಂಡು
ಮರಣವನ್ನು ಎಂದರೆ ಶಿಲುಬೆಯ
ಮರಣವನ್ನೂ ಹೊಂದುವಷ್ಟು ವಿಧೇಯರಾದರು.
ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ,
ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ.
ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು.
ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
O sacrifício redentor
Jesus deu a própria vida por nós. Ele é a propiciação pelos nossos pecados e o autor da salvação eterna para todos os que lhe obedecem.
ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.
ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.
ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?
ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ. ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.
ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.
ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.
O caminho da salvação
Jesus é o mediador da nova aliança. Ele vive para interceder por nós e pode salvar perfeitamente todos os que se achegam a Deus por meio dele.
ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.
ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.
ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.
ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ. ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.
ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ. ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ," ಎಂದನು.
ಆ ದೂತನು ಸ್ತ್ರೀಯರಿಗೆ, "ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು. ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ.
ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ.
ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.