Santa ceia
A Santa Ceia é uma das ordenanças mais sagradas da igreja cristã. Instituída por Jesus na última noite antes da crucificação, ela celebra seu sacrifício e proclama sua morte até que Ele volte.
A instituição por Jesus
Na noite em que foi traído, Jesus tomou o pão e o cálice, deu graças e os compartilhou com os discípulos, dizendo: 'Fazei isto em memória de mim.'
ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, "ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ," ಎಂದರು.
ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, "ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ. ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, "ತೆಗೆದುಕೊಳ್ಳಿರಿ, ಇದು ನನ್ನ ದೇಹ," ಎಂದರು.
ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.
ಯೇಸು ಅವರಿಗೆ, "ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ. ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ," ಎಂದು ಹೇಳಿದರು.
ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, "ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ," ಎಂದರು.
ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, "ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.
O significado espiritual
A Ceia é participação no corpo e no sangue de Cristo. Jesus ensinou que quem come de sua carne e bebe de seu sangue tem a vida eterna.
ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ," ಎಂದರು.
ಯೇಸು ಅವರಿಗೆ, "ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ. ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು. ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು. ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು," ಎಂದರು.
ಸ್ತೋತ್ರಮಾಡಿ ಮುರಿದು, "ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ," ಎಂದರು. ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, "ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ," ಎಂದರು. ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು. ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
A prática da Igreja
Desde os primeiros cristãos, a Ceia do Senhor é parte fundamental da vida comunitária da Igreja, celebrada com reverência e exame de consciência.
ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,
ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.
ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.
ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು. ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.