Santidade
A santidade é o chamado supremo de Deus para o seu povo. 'Sede santos, porque eu sou santo' — essa ordem ressoa por toda a Escritura, convidando-nos a uma vida separada para Deus.
O chamado à santidade
Deus nos escolheu antes da fundação do mundo para sermos santos. A santificação é sua vontade expressa e nosso destino em Cristo.
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, "ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು" ಎಂದು ಬರೆದಿದೆಯಲ್ಲಾ.
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, "ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು" ಎಂದು ಬರೆದಿದೆಯಲ್ಲಾ.
ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ. ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
O Deus santo
O Senhor é santo em toda a sua natureza. O universo testemunha sua santidade, e os anjos proclamam: Santo, Santo, Santo.
ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ,
ನೀನು ಪವಿತ್ರಸ್ವರೂಪನು.
"ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ;
ನಿನ್ನ ಹೊರತು ದೇವರು ಯಾರೂ ಇಲ್ಲ
ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ,
"ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು,
ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು."
ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು" ಇದು ಕರ್ತನಾದ ಯೆಹೋವನ ನುಡಿ.
A prática da santidade
A santidade se expressa em pensamentos puros, ações corretas e separação do pecado. É um processo contínuo de purificação e dedicação a Deus.
ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.
ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ. ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
A Palavra que santifica
Jesus disse: 'Santifica-os na verdade; a tua palavra é a verdade.' A Bíblia é o instrumento de Deus para nos purificar e transformar.
ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?
ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ,
ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ,
ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
Templo do Espírito Santo
Nosso corpo é templo de Deus. Devemos honrá-lo com santidade, guardando mente e coração e buscando a semelhança com Cristo.
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ, ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
ಆತನು ದೇವಸ್ವರೂಪನಾಗಿದ್ದರೂ,
ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ
ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
ತನ್ನನ್ನು ಬರಿದು ಮಾಡಿಕೊಂಡು
ದಾಸನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದನು.
ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ
ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ,
ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ
ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,
ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು
ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ. ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ.
ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು. ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು. ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ. ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.
ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
"ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
ಕೆಟ್ಟದ್ದನಲ್ಲ ಒಳ್ಳೆಯದನ್ನು,
ಅನುಸರಿಸಿ ಬಾಳಿರಿ.
ನೀವು ಅಂದುಕೊಂಡಂತೆ,
ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
ಯೆಹೋವನ ಭಯವೇ ಜ್ಞಾನಕ್ಕೆ ಮೂಲವು,
ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
"ಇದು ದೇವರಿಗಾಗಿ" ಎಂದು ದುಡುಕಿ ಹರಕೆಮಾಡುವುದು,
ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.
ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.
ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ;
ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ.
ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,
ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.