Saúde
A saúde é uma bênção de Deus. A Bíblia ensina que Deus é nosso curador, que devemos cuidar do corpo como templo do Espírito e que a alegria do Senhor renova nossas forças.
Deus, o nosso curador
O Senhor é quem sara todas as nossas doenças. Ele prometeu abençoar o pão e a água e tirar as enfermidades do meio do seu povo.
ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.
ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ,
ಅವರ ಗಾಯಗಳನ್ನು ಕಟ್ಟುತ್ತಾರೆ.
ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
ಆದರೆ ಯೇಸು ಇದನ್ನು ಕೇಳಿ ಅವರಿಗೆ, "ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
O corpo como templo
Nosso corpo é templo do Espírito Santo. A Bíblia nos encoraja a cuidar da saúde física com disciplina e reverência a Deus.
ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ. ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.
ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.
ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ನೀನು ಆರೋಗ್ಯವೂ ಅಭಿವೃದ್ಧಿಯೂ ಹೊಂದಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ;
ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.
ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು;
ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.
A alegria que cura
O coração alegre é bom remédio. A esperança do coração traz alegria, e as palavras agradáveis são como favo de mel — doçura para a alma e saúde para o corpo.
ಹರ್ಷಹೃದಯವು ಒಳ್ಳೆಯ ಔಷಧ;
ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ,
ಎಲುಬುಗಳಿಗೆ ಕ್ಷೇಮವೂ ಆಗಿವೆ.
ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ;
ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.
ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು.
ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು.
ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.