Seguir a Jesus
Seguir a Jesus é o convite mais transformador da Bíblia. Jesus chamou pescadores, cobradores de impostos e pessoas comuns para deixar tudo e segui-lo. Esse chamado continua vivo hoje.
O chamado de Jesus
Jesus disse: 'Segue-me'. Esse convite simples e poderoso mudou a vida de pescadores, publicanos e pessoas comuns ao longo da história.
ಅವರಿಗೆ ಆತನು, "ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು" ಎಂದು ಹೇಳುತ್ತಲೇ, ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
ಯೇಸು ಮತ್ತಾಯನನ್ನು ಕರೆದದ್ದು
ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, "ನನ್ನನ್ನು ಹಿಂಬಾಲಿಸು" ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, "ನನ್ನನ್ನು ಹಿಂಬಾಲಿಸು" ಎಂದನು.
ಯೇಸುವಿನ ಅನುಯಾಯಿಗಳು
ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, "ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ" ಎಂದು ಹೇಳಲು, ಆತನು ಅವನಿಗೆ, "ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ" ಎಂದು ಹೇಳಿದನು.
ಯೇಸು ಮತ್ತೊಬ್ಬನಿಗೆ, "ನನ್ನನ್ನು ಹಿಂಬಾಲಿಸು" ಎಂದು ಹೇಳಲು ಅವನು, "ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು" ಅಂದನು. ಆದರೆ ಯೇಸು ಅವನಿಗೆ, "ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು" ಎಂದು ಹೇಳಿದನು.
ಇನ್ನೊಬ್ಬನು ಸಹ, "ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು" ಅಂದನು. ಯೇಸು ಅವನಿಗೆ, "ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ" ಎಂದು ಹೇಳಿದನು.
O custo do discipulado
Seguir a Jesus exige renúncia. É preciso tomar a cruz diariamente, deixar tudo para trás e amar a Cristo acima de qualquer outro vínculo.
ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ "ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
"ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
ಪೇತ್ರನು ಆತನಿಗೆ, "ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ" ಎಂದು ಹೇಳುವುದಕ್ಕೆ ಪ್ರಾರಂಭಿಸಿದನು. ಅದಕ್ಕೆ ಯೇಸು, "ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ, ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು. ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು" ಎಂದು ಹೇಳಿದನು.
Caminhar com Cristo
Quem segue a Jesus não anda em trevas, mas tem a luz da vida. Ele nos convida a crescer nele e a servir como Ele serviu.
ಯೇಸು ಲೋಕದ ಬೆಳಕಾಗಿದ್ದಾನೆ
ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, "ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು" ಎಂದು ಹೇಳಿದನು.
ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.
ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.