A segunda vinda de Cristo
A segunda vinda de Cristo é a esperança suprema da Igreja. Jesus prometeu que voltará com poder e grande glória para julgar os vivos e os mortos e estabelecer seu Reino eterno.
A promessa do retorno
Jesus prometeu voltar. Os anjos declararam que Ele virá da mesma forma como ascendeu. A Igreja aguarda esse dia glorioso com expectativa.
"ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು" ಎಂದು ಹೇಳಿದರು.
ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. "ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು" ಎಂದು ಹೇಳಿದರು.
"ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, "ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!" ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.
ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, "ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!" ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.
"ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
Os sinais dos tempos
Jesus descreveu os sinais que precederão sua volta: falsos profetas, guerras, fome, terremotos e tribulação. Devemos discernir os tempos sem nos alarmar.
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, "ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?" ನಮಗೆ ಹೇಳು ಅನ್ನಲು ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, "ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ. ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
"ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು. ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.
ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು. ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ. ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.
ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ. ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ
"ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
"ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು, ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು."
ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
A vinda gloriosa
Cristo virá nas nuvens com poder e grande glória, enviará seus anjos e reunirá seus escolhidos dos quatro ventos.
"ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
ಅಂಜೂರ ಮರದ ದೃಷ್ಟಾಂತ
"ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ. ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
ಮನುಷ್ಯಕುಮಾರನು ಪುನರಾಗಮನ
"ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ" ಅಂದನು.
ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.
ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು. ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು."
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು. ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.
Vigilância e preparo
Ninguém sabe o dia nem a hora. Jesus nos ordena a vigiar, orar e estar prontos, pois Ele virá quando menos esperamos.
"ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
"ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
"ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು. ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ" ಅಂದನು.
ದೇವರ ವರಗಳ ಒಳ್ಳೆಯ ನಿರ್ವಾಹಕನು
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
ಸಮಾಪ್ತಿ ವಾಕ್ಯಗಳು.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ, ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
A esperança bendita
A aguardamos a bendita esperança e a manifestação da glória do nosso grande Deus e Salvador Jesus Cristo.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ. ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
"ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ" ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.