A segunda vinda de Cristo
A segunda vinda de Cristo é a esperança suprema da Igreja. Jesus prometeu que voltará com poder e grande glória para julgar os vivos e os mortos e estabelecer seu Reino eterno.
A promessa do retorno
Jesus prometeu voltar. Os anjos declararam que Ele virá da mesma forma como ascendeu. A Igreja aguarda esse dia glorioso com expectativa.
"ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು," ಎಂದು ಹೇಳಿದರು.
ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು, "ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು," ಎಂದು ಹೇಳಿದರು.
ಯೇಸುಸ್ವಾಮಿಯ ಆದರಣೆಯ ಮಾತುಗಳು
"ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ. ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ. ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, "ಹೌದು, ನಾನು ಬೇಗ ಬರುತ್ತೇನೆ!" ಎಂದು ಹೇಳುತ್ತಾರೆ.
ಆಮೆನ್. ಕರ್ತ ಯೇಸುವೇ ಬಾ.
ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, "ಹೌದು, ನಾನು ಬೇಗ ಬರುತ್ತೇನೆ!" ಎಂದು ಹೇಳುತ್ತಾರೆ.
ಆಮೆನ್. ಕರ್ತ ಯೇಸುವೇ ಬಾ.
ಆಮಂತ್ರಣ ಮತ್ತು ಎಚ್ಚರಿಕೆ
ಆಗ ಕರ್ತ ಯೇಸು, "ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.
Os sinais dos tempos
Jesus descreveu os sinais que precederão sua volta: falsos profetas, guerras, fome, terremotos e tribulação. Devemos discernir os tempos sem nos alarmar.
ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, "ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು," ಎಂದು ಕೇಳಿದರು.
ಆಗ ಯೇಸು ಉತ್ತರವಾಗಿ ಅವರಿಗೆ, "ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.
"ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು. ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು. ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.
ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.
"ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.
ಆಗ ಯಾರಾದರೂ ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ! ಅಗೋ ಅಲ್ಲಿದ್ದಾನೆ!’ ಎಂದು ಹೇಳಿದರೆ ಅವನನ್ನು ನಂಬಬೇಡಿರಿ. ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.
ಆಗ ಯಾರಾದರೂ ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ! ಅಗೋ ಅಲ್ಲಿದ್ದಾನೆ!’ ಎಂದು ಹೇಳಿದರೆ ಅವನನ್ನು ನಂಬಬೇಡಿರಿ. ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.
"ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ.
ಮರ ಹಾಗೂ ಫಲ
"ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.
"ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು. ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ.
"ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.
A vinda gloriosa
Cristo virá nas nuvens com poder e grande glória, enviará seus anjos e reunirá seus escolhidos dos quatro ventos.
"ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ,
" ‘ಸೂರ್ಯನು ಕತ್ತಲಾಗುವನು;
ಚಂದ್ರನು ಕಾಂತಿಹೀನನಾಗುವನು.
ಆಕಾಶದಿಂದ ನಕ್ಷತ್ರಗಳು ಬೀಳುವವು;
ಮತ್ತು ಆಕಾಶದ ಶಕ್ತಿಗಳು ಕದಲುವವು.’
"ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು. ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
"ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ.
ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.
"ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು. ಆಕಾಶದ ಶಕ್ತಿಗಳು ಕದಲುವುದರಿಂದ ಲೋಕಕ್ಕೆ ಏನು ಸಂಭವಿಸುವುದೋ ಎಂಬ ಭಯಭೀತಿಯಿಂದ, ಮಾನವರು ಮನಗುಂದಿಹೋಗುವರು. ಆಗ ಮನುಷ್ಯಪುತ್ರನಾದ ನಾನು ಶಕ್ತಿಯಿಂದಲೂ ಮಹಾ ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಜನರು ಕಾಣುವರು. ಈ ಸಂಗತಿಗಳು ಸಂಭವಿಸಲು ತೊಡಗುವಾಗ, ತಲೆಯೆತ್ತಿ ನಿಲ್ಲಿರಿ. ಏಕೆಂದರೆ ನಿಮ್ಮ ವಿಮೋಚನೆಯು ಸಮೀಪಿಸಿತು," ಎಂದರು.
ಆಗ ಮನುಷ್ಯಪುತ್ರನಾದ ನಾನು ಶಕ್ತಿಯಿಂದಲೂ ಮಹಾ ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಜನರು ಕಾಣುವರು.
"ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು. ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.
ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು. ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
Vigilância e preparo
Ninguém sabe o dia nem a hora. Jesus nos ordena a vigiar, orar e estar prontos, pois Ele virá quando menos esperamos.
"ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.
"ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.
ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.
"ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಬರುವುದು. ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ," ಎಂದರು.
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.
ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.
ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.
A esperança bendita
A aguardamos a bendita esperança e a manifestação da glória do nosso grande Deus e Salvador Jesus Cristo.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ. ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ. ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.
ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.
ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.
ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ. ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.
"ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ," ಎಂದು ಕರ್ತದೇವರು ಹೇಳುತ್ತಾರೆ.
ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.
ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
ದೇವರ ಮಕ್ಕಳು ಮತ್ತು ಪಾಪ
ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.