Separação
A separação traz dor profunda, mas a Bíblia nos consola com a promessa de que Deus nunca nos abandona. Seja na perda, na distância ou no luto, Ele é nosso refúgio.
Deus está presente na dor
O Senhor está perto dos quebrantados de coração e promete nunca nos deixar órfãos. Na separação, Ele é nosso consolo mais íntimo.
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ;
ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ,
ಅವರ ಗಾಯಗಳನ್ನು ಕಟ್ಟುತ್ತಾನೆ.
"ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;
ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
Esperança e conforto
A separação não é o fim. Deus transforma a dor em esperança, e o sofrimento presente produz uma glória eterna que supera toda aflição.
ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.
ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
Amor que persevera
O amor verdadeiro é mais forte que a separação. A fé nos sustenta e nos dá a certeza de que o reencontro virá.
ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು,
ಮುಣುಗಿಸಲಾರವು ಅದನ್ನು ಪ್ರವಾಹಗಳು.
ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.
ಅದಲ್ಲದೆ ಅವನು, "ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು" ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು
ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ; ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು" ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.
ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.