Servir
Servir é o coração do evangelho. Jesus não veio para ser servido, mas para servir. O cristão é chamado a seguir esse exemplo, colocando-se a serviço de Deus e do próximo.
O exemplo de Jesus
Cristo é o modelo supremo de serviço. Ele lavou os pés dos discípulos e deu a própria vida como resgate por muitos.
ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು" ಎಂದು ಹೇಳಿದನು.
ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು" ಎಂದು ಹೇಳಿದನು.
ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ. ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.
ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, "ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು" ಎಂದು ಹೇಳಿ,
Servindo ao Senhor
Servir a Deus é um privilégio e uma ordenança. Devemos amá-lo de todo coração e servi-lo com alegria e fidelidade.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು" ಎಂದನು.
ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ," ಎಂದು ಹೇಳಿ
ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
Servir ao próximo
A liberdade cristã nos chama a servir uns aos outros pelo amor. Cada dom recebido é para edificação do corpo de Cristo.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.
ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
"ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
Fidelidade e recompensa
O servo fiel e sábio será recompensado pelo Senhor. A fidelidade no serviço honra a Deus e produz frutos eternos.
ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,
ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ.
ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.