Servir
Servir é o coração do evangelho. Jesus não veio para ser servido, mas para servir. O cristão é chamado a seguir esse exemplo, colocando-se a serviço de Deus e do próximo.
O exemplo de Jesus
Cristo é o modelo supremo de serviço. Ele lavou os pés dos discípulos e deu a própria vida como resgate por muitos.
ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ," ಎಂದು ಹೇಳಿದರು.
ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ," ಎಂದು ಹೇಳಿದರು.
ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ. ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ, ಅವನು ನಿಮ್ಮ ಆಳಾಗಿರಲಿ.
ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, "ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು," ಎಂದರು.
Servindo ao Senhor
Servir a Deus é um privilégio e uma ordenança. Devemos amá-lo de todo coração e servi-lo com alegria e fidelidade.
ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು," ಎಂದನು.
ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ," ಎಂದು ಹೇಳಿದನು.
ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ. ನಾನು ಈ ಹೊತ್ತು ನಿಮ್ಮ ಮೇಲಿಗಾಗಿ ನಿಮಗೆ ಆಜ್ಞಾಪಿಸುವ ಯೆಹೋವ ದೇವರ ಆಜ್ಞೆಗಳನ್ನೂ ಅವರ ನಿಮಯಗಳನ್ನೂ ಕಾಪಾಡುವುದೇ ಹೊರತು, ಮತ್ತೇನೂ ನಮ್ಮ ದೇವರಾಗಿರುವ ಯೆಹೋವ ದೇವರು ನಿಮ್ಮಿಂದ ಕೇಳುತ್ತಾರೆ?
ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.
ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?
Servir ao próximo
A liberdade cristã nos chama a servir uns aos outros pelo amor. Cada dom recebido é para edificação do corpo de Cristo.
ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.
ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.
ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.
"ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.
ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.
Fidelidade e recompensa
O servo fiel e sábio será recompensado pelo Senhor. A fidelidade no serviço honra a Deus e produz frutos eternos.
"ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಯೆಹೋವ ದೇವರಲ್ಲಿ ಯಾರು ಹರ್ಷಿಸುತ್ತಾರೋ
ಅವರ ಹೆಜ್ಜೆಗಳನ್ನು ಸ್ಥಿರಪಡಿಸುವರು.
ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ;
ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.