Sexo
A Bíblia trata a sexualidade como um presente de Deus para o contexto do casamento. As Escrituras celebram a intimidade conjugal e orientam sobre pureza e santidade sexual.
A sexualidade no plano de Deus
Desde a criação, Deus projetou a intimidade sexual como expressão de amor entre marido e mulher, abençoando a união conjugal.
ಹೀಗೆ ದೇವರು;
"ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು."
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, "ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ" ಎಂದು ಅವರಿಗೆ ಹೇಳಿದನು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಆತನು ಪ್ರತ್ಯುತ್ತರವಾಗಿ, "ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.
ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ,
ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ,
ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
A santidade na intimidade
O leito conjugal é honroso. A Bíblia celebra a alegria da intimidade dentro do casamento e orienta o casal ao amor e respeito mútuo.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.
ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ."
ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? "ಇಬ್ಬರು ಒಂದೇ ಶರೀರವಾಗಿರುವರೆಂದು" ದೇವರವಾಕ್ಯ ಹೇಳುತ್ತದಲ್ಲಾ. ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.
Pureza sexual
Deus nos chama à santificação e à fuga da imoralidade. O corpo do cristão é templo do Espírito Santo e deve ser tratado com honra.
ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. "ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ", ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
"ವ್ಯಭಿಚಾರಮಾಡಬಾರದು.
"‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು. ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು. ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ. ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ. ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ. ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ. ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ. ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ. ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ. ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ. ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ. ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ. ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.
"‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು. ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
"‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
"‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ. ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು. ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.
ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು. ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು. ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.