Sexo
A Bíblia trata a sexualidade como um presente de Deus para o contexto do casamento. As Escrituras celebram a intimidade conjugal e orientam sobre pureza e santidade sexual.
A sexualidade no plano de Deus
Desde a criação, Deus projetou a intimidade sexual como expressão de amor entre marido e mulher, abençoando a união conjugal.
ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು.
ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು.
ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.
ದೇವರು ಅವರನ್ನು ಆಶೀರ್ವದಿಸಿ, "ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ," ಎಂದು ಅವರಿಗೆ ಹೇಳಿದರು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
ಯೇಸು ಉತ್ತರವಾಗಿ ಅವರಿಗೆ, "ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’ ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ? ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು," ಎಂದು ಹೇಳಿದರು.
ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ;
ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.
ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ;
ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ;
ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.
A santidade na intimidade
O leito conjugal é honroso. A Bíblia celebra a alegria da intimidade dentro do casamento e orienta o casal ao amor e respeito mútuo.
ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ. ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.
ಅವರಿಗೆ ಸ್ವಯಂನಿಯಂತ್ರಣ ಇಲ್ಲದಿದ್ದರೆ, ಮದುವೆಮಾಡಿಕೊಳ್ಳಲಿ, ಕಾಮದಾಶೆ ಪಡುವುದಕ್ಕಿಂತ ಮದುವೆ ಮಾಡಿಕೊಳ್ಳುವುದು ಉತ್ತಮ.
ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.
ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ. ವೇಶ್ಯೆಯನ್ನು ಸೇರುವವನು ಅವಳೊಂದಿಗೆ ಒಂದೇ ದೇಹವಾಗುವನೆಂಬುದು ನಿಮಗೆ ತಿಳಿಯದೋ? "ಅವರಿಬ್ಬರೂ ಒಂದೇ ಶರೀರವಾಗಿರುವರು," ಎಂದು ಹೇಳಲಾಗಿದೆಯಲ್ಲವೇ? ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ.
Pureza sexual
Deus nos chama à santificação e à fuga da imoralidade. O corpo do cristão é templo do Espírito Santo e deve ser tratado com honra.
ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ. ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ. ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.
ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.
ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.
ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.
ವ್ಯಭಿಚಾರ ಮಾಡಬೇಡ.
" ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.
" ‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ.
" ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.
" ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.
" ‘ನಿನ್ನ ಮಗನ ಮಗಳ ಕೂಡ, ಇಲ್ಲವೆ ಮಗಳ ಮಗಳ ಕೂಡ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನಗೆ ಅಗೌರವವಾಗಿದೆ.
" ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ.
" ‘ನಿನ್ನ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಸಮೀಪ ಬಂಧು.
" ‘ನಿನ್ನ ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ.
" ‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ.
" ‘ನಿನ್ನ ಸೊಸೆಯೊಂದಿಗೆ ಲೈಂಗಿಕ ಸಂಪರ್ಕ ಬೇಡ. ಆಕೆ ನಿನ್ನ ಮಗನ ಹೆಂಡತಿ. ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
" ‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು.
" ‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ.
" ‘ನಿನ್ನ ಹೆಂಡತಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದುಕೊಳ್ಳಬೇಡ. ಒಬ್ಬಳು ಜೀವಂತವಾಗಿರುವಾಗ ಮತ್ತೊಬ್ಬಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.
" ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯ ಸಂಪರ್ಕ ಮಾಡಬೇಡ.
" ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.
" ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.
" ‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು.
" ‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು.
ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ. ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.
ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು. ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್.
ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು. ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರೊಂದಿಗೊಬ್ಬರು ಕಾಮಾತುರದಿಂದ ತಾಪಗೊಂಡರು. ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣ ಕೃತ್ಯಗಳನ್ನು ನಡೆಸಿ ತಮ್ಮ ತಪ್ಪಿಗೆ ತಕ್ಕ ದಂಡನೆಯನ್ನು ಹೊಂದುವವರಾದರು.