Sonhos
Sonhos aparecem em toda a Bíblia como meio de revelação divina. Deus falou através de sonhos a patriarcas, profetas e servos, mas também alertou contra falsos sonhadores.
Sonhos como revelação divina
Deus usou sonhos para comunicar sua vontade a homens e mulheres ao longo da história bíblica, revelando caminhos e mistérios.
ಯೆಹೋವನು ಅವರಿಗೆ, "ನನ್ನ ಮಾತನ್ನು ಕೇಳಿರಿ.
ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ
ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು,
ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
ತರುವಾಯ ನಾನು
ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು.
ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು.
ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; "ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ. ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ. ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
"ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು,
ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು;
ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, "ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?" ಎಂದು ಕೇಳಿದನು.
ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, "ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು. ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
Sonhos na história da Bíblia
De José no Egito a José pai de Jesus, Deus guiou a história da salvação através de sonhos, protegendo e dirigindo seu povo.
ಅವರು ಅವನಿಗೆ, "ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ" ಎಂದು ಹೇಳಲು ಯೋಸೇಫನು ಅವರಿಗೆ, "ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ" ಎಂದು ಹೇಳಿದನು.
ಆಗ ಫರೋಹನು ಯೋಸೇಫನಿಗೆ, "ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ" ಎಂದು ಹೇಳಿದನು.
ಅದಕ್ಕೆ ಯೋಸೇಫನು, "ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು" ಎಂದು ಹೇಳಿದನು.
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು," ಅಂದನು.
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, "ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು" ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ,
ನಾವು ಕನಸು ಕಂಡವರಂತೆ ಇದ್ದೆವು.
Sabedoria sobre sonhos
A Bíblia ensina discernimento: nem todo sonho vem de Deus. Devemos entregar nossos planos ao Senhor e confiar na direção dele.
ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ,
ನಿನ್ನ ಉದ್ದೇಶಗಳು ಸಫಲವಾಗುವವು.
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ,
ಯೆಹೋವನ ಸಂಕಲ್ಪವೇ ಈಡೇರುವುದು.
ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, "ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ" ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವನು, "ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ" ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ. ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ. ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.
ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.
ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ
ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.
ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.