Sonhos
Sonhos aparecem em toda a Bíblia como meio de revelação divina. Deus falou através de sonhos a patriarcas, profetas e servos, mas também alertou contra falsos sonhadores.
Sonhos como revelação divina
Deus usou sonhos para comunicar sua vontade a homens e mulheres ao longo da história bíblica, revelando caminhos e mistérios.
ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, "ನನ್ನ ಮಾತುಗಳನ್ನು ಈಗ ಕೇಳಿರಿ:
"ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ
ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು,
ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.
"ಆಮೇಲೆ ನಾನು,
ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,
ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ನಿಮ್ಮ ಯುವಜನರಿಗೆ ದರ್ಶನಗಳಾಗುವವು.
ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: "ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ. ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ! ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ:
"ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ
ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,
ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು,
ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು,
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.
ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, "ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?" ಎಂದನು.
ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, "ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು. ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.
Sonhos na história da Bíblia
De José no Egito a José pai de Jesus, Deus guiou a história da salvação através de sonhos, protegendo e dirigindo seu povo.
ಅವರು ಯೋಸೇಫನಿಗೆ, "ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ," ಎಂದರು.
ಯೋಸೇಫನು ಅವರಿಗೆ, "ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ," ಎಂದನು.
ಆಗ ಫರೋಹನು ಯೋಸೇಫನಿಗೆ, "ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ," ಎಂದನು.
ಯೋಸೇಫನು ಫರೋಹನಿಗೆ ಉತ್ತರವಾಗಿ, "ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು," ಎಂದನು.
ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, "ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ. ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು," ಎಂದು ಹೇಳಿದನು.
ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, "ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ," ಎಂದು ಹೇಳಿ ಕಳುಹಿಸಿದಳು.
ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ
ನಾವು ಕನಸು ಕಂಡವರ ಹಾಗಿದ್ದೆವು.
Sabedoria sobre sonhos
A Bíblia ensina discernimento: nem todo sonho vem de Deus. Devemos entregar nossos planos ao Senhor e confiar na direção dele.
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು,
ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ;
ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.
ನಿಮ್ಮ ಮಧ್ಯೆ ಯಾವ ಪ್ರವಾದಿಯೇ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆ ಮಾಡಿ, "ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ," ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು. ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ. ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.
" ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ. ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.
ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ," ಎಂದು ಯೆಹೋವ ದೇವರು ಹೇಳುತ್ತಾರೆ. "ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ," ಎಂದು ಯೆಹೋವ ದೇವರು ನುಡಿಯುತ್ತಾರೆ.
ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ.
ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ.
ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.