Superação
Superar desafios, dificuldades e tentações faz parte da caminhada cristã. A Bíblia nos garante que, em Cristo, somos mais que vencedores em todas as circunstâncias.
Vitória em Cristo
Jesus já venceu o mundo. Nele temos coragem, paz e a certeza de que nenhuma adversidade poderá nos derrotar definitivamente.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.
ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ. ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.
Superando o mal com o bem
O cristão vence o mal não com violência, mas com o bem. O amor, a fé e a perseverança são as armas da superação.
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.
ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.
ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ. ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.
ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
Força e coragem divina
Deus é nosso escudo e fortaleza. Quando o medo tenta nos paralisar, a presença do Senhor nos fortalece e nos encoraja a prosseguir.
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ;
ನೀನು ನನ್ನ ಗೌರವಕ್ಕೆ ಆಧಾರನೂ,
ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ;
ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
ಹಿಂಸಕರಿಂದ ಬಿಡಿಸಿದವನು ನೀನೇ;
ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ;
ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
ಯೆಹೋವನೇ, ದಯವಿಟ್ಟು ರಕ್ಷಿಸು;
ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.
ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ;
ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು" ಎಂದು ಹೇಳಿದೆನು.
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು" ಎಂದು ಹೇಳಬೇಕು.
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
Resistindo a tentação
A armadura de Deus nos protege contra as investidas do mal. Resistir ao diabo, vigiar e orar são essenciais para a superação espiritual.
ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
"ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. ಸೈತಾನನಿಗೆ ಅವಕಾಶಕೊಡಬೇಡಿರಿ.
ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು. ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ "ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು" ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
Perseverança até o fim
A corrida da fé exige perseverança. Devemos lançar fora todo peso e olhar para Jesus, o autor e consumador da nossa fé.
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ. ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
Descanso e renovação
Jesus convida os cansados e sobrecarregados a descansar nele. Sua graça é suficiente para nos renovar em meio às tribulações.
"ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. "ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ" ಎಂದು ದೇವರು ತಾನೇ ಹೇಳಿದ್ದಾನೆ.
ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ" ಅಂದನು.
ಅವರಿಗೆ, "ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ" ಎಂದು ಹೇಳಿದನು.
ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, "ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ" ಎಂದು ಹೇಳಿದನು.
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು" ಎಂದು ಹೇಳಿದನು.
ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ!
ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ;
ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? "ಇಬ್ಬರು ಒಂದೇ ಶರೀರವಾಗಿರುವರೆಂದು" ದೇವರವಾಕ್ಯ ಹೇಳುತ್ತದಲ್ಲಾ. ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ. ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. "ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ", ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ. ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.