Temor do Senhor
O temor do Senhor é o princípio da sabedoria. Não se trata de medo, mas de reverência profunda, respeito e admiração diante da santidade e grandeza de Deus.
O princípio da sabedoria
A Escritura afirma que temer ao Senhor é o primeiro passo para a verdadeira sabedoria. Quem teme a Deus discerne o certo e aprende a viver com prudência.
ಯೆಹೋವನ ಭಯವೇ ಜ್ಞಾನಕ್ಕೆ ಮೂಲ;
ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು.
ಆತನ ಸ್ತುತಿಯು ನಿರಂತರವಾದದ್ದು.
ಯೆಹೋವನ ಭಯವೇ ಜ್ಞಾನಕ್ಕೆ ಮೂಲವು,
ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
ಯೆಹೋವನ ಭಯವೇ ಜ್ಞಾನೋಪದೇಶ,
ಗೌರವಕ್ಕೆ ಮೊದಲು ವಿನಯ.
ಆಮೇಲೆ ಮನುಷ್ಯರಿಗೆ,
‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’" ಎಂದು ಹೇಳಿದನು.
ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ.
ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು.
ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ;
ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
Bênçãos do temor
Quem teme ao Senhor encontra vida longa, provisão e proteção. O temor de Deus nos guarda do mal e nos conduz à humildade.
ಧನ, ಮಾನ ಮತ್ತು ಜೀವಗಳು
ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ,
ದುಷ್ಟರ ವರ್ಷಗಳು ಅಲ್ಪ.
ಯೆಹೋವನ ಭಯ ಜೀವದ ಬುಗ್ಗೆ,
ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
ಕೃಪಾಸತ್ಯತೆಗಳಿಂದ ಪಾಪನಿವಾರಣೆ,
ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು,
ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ;
ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ;
ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
Vivendo no temor do Senhor
Temer ao Senhor é obedecer seus mandamentos, andar em seus caminhos e amá-lo de todo coração. Essa reverência se expressa em justiça e integridade.
ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ;
ನಡುಗುತ್ತಾ ಉಲ್ಲಾಸಪಡಿರಿ.
ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ;
ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
ದೀರ್ಘಾಯುಷ್ಯವು ಬೇಕೋ?
ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ;
ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;
ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ" ಎಂದು ಎಚ್ಚರಿಸಿದನು.
ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
"‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು. ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
"ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.