Tentação
A tentação faz parte da jornada cristã, mas Deus é fiel e não permite que sejamos tentados além do que podemos suportar. Em Cristo, temos poder para resistir e vencer.
A realidade da tentação
Jesus foi tentado em tudo como nós e compreende nossas lutas. A Bíblia nos ensina que a tentação não é pecado — o pecado está em ceder a ela.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ "ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು" ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
O escape providenciado
Deus sempre providencia uma saída. Não precisamos cair, pois Ele nos dá forças para resistir e promete nos livrar da provação.
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
ನಮ್ಮನ್ನು ಶೋಧನೆಯೊಳಗೆ ಸೇರಿಸದೆ
ಕೆಡುಕನಿಂದ; ನಮ್ಮನ್ನು ತಪ್ಪಿಸು
ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು;
ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
Vigilância e resistência
A Palavra de Deus, a oração e a vigilância são nossas armas contra a tentação. Vigiar e orar é o conselho do próprio Jesus.
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ" ಎಂದು ಹೇಳಿದನು.
ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.
ಆತನು ಮತ್ತೆ ಹೇಳಿದ್ದೇನೆಂದರೆ, "ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ, ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ."
ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ
ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ಧಗಧಗಿಸುವ ಕೆಂಡದ ಮೇಲೆ ನಡೆದರೆ
ಕಾಲು ಬೇಯುವುದಿಲ್ಲವೋ?
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.