Sobre ter filhos
Filhos são uma dádiva do Senhor, uma herança que Deus confia aos pais. A Bíblia celebra a maternidade e a paternidade como vocações sagradas e fontes de bênção.
Filhos: herança do Senhor
A Escritura declara que os filhos são bênção de Deus. Cada criança é um presente precioso confiado aos pais para ser cuidado com amor.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ.
ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,
ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;
ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,
ಎಣ್ಣೇಮರದ ಸಸಿಗಳ ಹಾಗೆ ಇರುವರು.
ಬಂಜೆಯು ಮಕ್ಕಳೊಂದಿಗೆ,
ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ.
ಯೆಹೋವನಿಗೆ ಸ್ತೋತ್ರ!
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, "ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ" ಎಂದು ಅವರಿಗೆ ಹೇಳಿದನು.
Instruir nos caminhos de Deus
A Bíblia orienta os pais a instruir seus filhos nos caminhos do Senhor desde cedo, com dedicação, disciplina e exemplo.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.
ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು,
ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.
Cada vida é preciosa
Deus conhece e forma cada criança no ventre. Antes de nascer, Ele já nos separou e preparou um propósito para cada vida.
"ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ" ಎಂಬ ವಾಕ್ಯವನ್ನು ದಯಪಾಲಿಸಿದನು.
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ,
ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ,
ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ
ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ,
ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ
ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
ಆದರೆ ಯೇಸು, "ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ" ಎಂದು ಹೇಳಿದನು.