Todo poderoso
Deus é Todo-Poderoso — onipotente, onisciente e onipresente. Nada está além do seu alcance, nada escapa ao seu conhecimento e nada foge ao seu controle soberano.
O poder soberano de Deus
O Senhor reina sobre todas as coisas. Desde a criação do universo até os detalhes da nossa vida, seu poder se manifesta de forma absoluta e inesgotável.
"ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
"ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ,
ಆತನ ಮಹತ್ತು ಅಪಾರವಾದದ್ದು.
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.
ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
Nada é impossível para Deus
Para Deus não há impossíveis. O que parece inalcançável aos nossos olhos é plenamente realizável nas mãos do Todo-Poderoso.
ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ" ಅಂದನು.
"ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ" ಎಂದನು.
ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ,
ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.
ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ;
ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು;
ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
O Rei eterno
Deus é o Rei eterno, imortal, invisível, único Deus sábio. Seu trono é desde a eternidade e seu reino não terá fim.
"ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ" ಎಂದು ದೇವರಾದ ಕರ್ತನು ಹೇಳುತ್ತಾನೆ.
ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು;
ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
ಸೇನಾಧೀಶ್ವರನಾದ ಯೆಹೋವ ದೇವರೇ,
ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು;
ಆಗ ಉದ್ಧಾರವಾಗುವೆವು.
Refúgio no Todo-Poderoso
O poder de Deus é nosso abrigo. Em tempos de tempestade, podemos descansar na certeza de que Ele sustenta e protege os seus.
ಅತ್ಯುನ್ನತನಾದ ದೇವರ ಮೊರೆಹೊಕ್ಕವನು,
ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ನಾನು ಯೆಹೋವನಿಗೆ, "ನೀನೇ ನನ್ನ ಶರಣನು, ನನ್ನ ದುರ್ಗವು,
ನಾನು ಭರವಸವಿಟ್ಟಿರುವ ನನ್ನ ದೇವರು" ಎಂದು ಹೇಳುವೆನು.
ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ,
ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.