Trabalhar para Deus
Trabalhar para Deus vai além do ofício secular. É dedicar a vida inteira — palavras, ações e atitudes — ao serviço do Reino, reconhecendo que cada tarefa pode glorificar o Senhor.
Servindo ao Senhor em tudo
Quando trabalhamos como para Deus, cada ação se torna um ato de adoração. Não importa a tarefa — o que importa é o coração dedicado.
ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ. ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ. ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.
Chamados para as boas obras
Fomos criados em Cristo Jesus para boas obras, que Deus preparou de antemão para que andássemos nelas. Não somos salvos por obras, mas para obras.
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.
ನಕ್ಷತ್ರಗಳಂತೆ ಪ್ರಕಾಶಿಸುವುದು
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
A missão do cristão
O chamado a trabalhar para Deus inclui a Grande Comissão: fazer discípulos de todas as nações, cooperando com Ele na expansão do Reino.
ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.
ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.