Trabalhar para Deus
Trabalhar para Deus vai além do ofício secular. É dedicar a vida inteira — palavras, ações e atitudes — ao serviço do Reino, reconhecendo que cada tarefa pode glorificar o Senhor.
Servindo ao Senhor em tudo
Quando trabalhamos como para Deus, cada ação se torna um ato de adoração. Não importa a tarefa — o que importa é o coração dedicado.
ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ. ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.
ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ. ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.
Chamados para as boas obras
Fomos criados em Cristo Jesus para boas obras, que Deus preparou de antemão para que andássemos nelas. Não somos salvos por obras, mas para obras.
ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.
ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ. ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.
ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ. ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, "ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ," ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ. ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.
A missão do cristão
O chamado a trabalhar para Deus inclui a Grande Comissão: fazer discípulos de todas as nações, cooperando com Ele na expansão do Reino.
ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.