Tristeza
A tristeza faz parte da experiência humana, mas a Bíblia nos assegura que Deus está perto dos que sofrem. Ele enxuga as lágrimas e transforma a dor em esperança.
Deus consola os aflitos
O Senhor está perto dos quebrantados de coração. Mesmo no vale mais escuro, sua presença é refúgio e consolo para a alma que chora.
ಯೆಹೋವನು ನೀತಿವಂತರ ಕೂಗನ್ನು ಕೇಳಿ,
ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ;
ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ.
ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ.
ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು;
ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
"ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
A alegria virá
A dor tem prazo de validade. A manhã de alegria sempre vem depois da noite de choro. Deus promete transformar o luto em dança.
ಆತನ ಕೋಪವು ಕ್ಷಣಮಾತ್ರವೇ;
ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು." ಎಂದು ಹೇಳಿದರು.
ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.
Entregando a dor a Deus
Podemos lançar sobre o Senhor toda nossa ansiedade e tristeza, porque Ele cuida de nós com ternura e não nos abandona.
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು" ಎಂದು ಹೇಳಿದನು.
ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
O choro e o arrependimento
Há tristezas que produzem arrependimento e conduzem à vida. O choro diante de Deus é acolhido e transformado em bênção.
ಯೆಹೋವನು ಹೀಗೆ ಹೇಳುತ್ತಾನೆ, "ಈಗಲಾದರೂ,
ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.
ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ."
ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ;
ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು
ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ.
ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.
ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ, "ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ" ಎಂದು ಹೇಳಿದನು.
ಜ್ಞಾನಿಯಾದ ಮಗನಿಂದ ತಂದೆಗೆ ಆನಂದ,
ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.
ನಿನ್ನ ಹೃದಯದಿಂದ ದುಃಖವನ್ನೂ,
ದೇಹದಿಂದ ಶ್ರಮೆಯನ್ನೂ ತೊಲಗಿಸು,
ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.