Tudo posso naquele que me fortalece
Filipenses 4:13 é um dos versículos mais conhecidos da Bíblia. Essa declaração de Paulo não é sobre capacidade humana, mas sobre a suficiência de Cristo que nos fortalece em toda circunstância.
Fortalecidos em Cristo
Nossa capacidade vem de Deus, não de nós mesmos. Paulo aprendeu que em qualquer situação — abundância ou necessidade — Cristo é a fonte inesgotável de poder.
ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ. ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ. ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.
Coragem e poder divino
Deus nos dá espírito de poder, amor e moderação. Nele somos mais que vencedores e podemos enfrentar qualquer adversidade.
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.
ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
ನಾನು ಯಾರಿಗೂ ಭಯಪಡೆನು?
ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ.
ನಾನು ಯಾರಿಗೂ ಹೆದರೆನು?
Confiança e vitória
Quando lançamos nossas ansiedades sobre Deus e resistimos ao inimigo pela fé, experimentamos a renovação e a transformação que vêm do Senhor.
ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.
ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.