Valioso
Cada ser humano é precioso aos olhos de Deus. As Escrituras revelam que fomos criados à imagem divina, resgatados por alto preço e chamados para um propósito eterno.
O valor que Deus nos dá
Nosso valor não vem de conquistas ou aparências, mas do fato de sermos amados pelo Criador. Deus cuida até dos passarinhos — quanto mais de nós!
ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು. ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ" ಎಂದು ಉತ್ತರ ಕೊಟ್ಟನು.
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
Preciosos aos olhos de Deus
O Senhor declara que somos preciosos e valiosos aos seus olhos. Ele nos chama de propriedade exclusiva e nos reveste de glória.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ,
ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
ಯೆರೂಸಲೇಮಿನ ಮುಂದಿನ ಮಹಾವೈಭವವು
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
O verdadeiro valor
A Bíblia nos ensina que a fé, a integridade e o caráter são mais valiosos que ouro ou prata. O que tem valor eterno transcende o material.
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು,
ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ,
ಸಮ್ಮತಿಯನ್ನೂ ಪಡೆದುಕೊಳ್ಳುವಿ.
ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ,
ದುಷ್ಟನ ಹೃದಯ ಮೌಲ್ಯವಿಲ್ಲದ್ದು.
ಗುಣವತಿಯಾದ ಸತಿ
ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು?
ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.