Vaso
A metáfora do vaso é uma das mais belas da Bíblia. Assim como o oleiro molda o barro, Deus nos forma segundo seus propósitos, fazendo de nós vasos úteis para sua glória.
Nas mãos do oleiro
Deus é o Oleiro e nós somos o barro. Ele tem autoridade e sabedoria para nos moldar conforme sua vontade perfeita, e não devemos questionar sua obra.
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ;
ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
ಕುಂಬಾರ ಮತ್ತು ಜೇಡಿಮಣ್ಣು
ಯೆಹೋವನು ಯೆರೆಮೀಯನಿಗೆ, "ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು" ಎಂಬ ಮಾತನ್ನು ದಯಪಾಲಿಸಿದನು. ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು. ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು.
ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು, "ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.
ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, "ಏಕೆ ನನ್ನನ್ನು ಹೀಗೆ ರೂಪಿಸಿದೆ", ಎಂದು ಕೇಳುವುದುಂಟೇ? ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ದೇವರ ಮೇಲೆ ಗುಣುಗುಟ್ಟುವವರನ್ನು ಖಂಡಿಸುವುದು
ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ!
ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?
ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು.
ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, "ಆತನು ಕೆಲಸ ಮಾಡಲಿಲ್ಲ" ಎಂದು ಹೇಳುವುದೋ? ಇಲ್ಲವೇ,
ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, "ಆತನಿಗೆ ವಿವೇಕವಿಲ್ಲ" ಎಂದು ಹೇಳುವುದೋ?
Vasos para honra
O cristão é chamado a ser um vaso de honra, purificado e preparado para toda boa obra. Nosso valor está em quem nos formou e no que carregamos.
ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ. ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು,
ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.
Moldados pela graça
Mesmo quando nos sentimos frágeis e imperfeitos, o poder de Deus se aperfeiçoa em nossa fraqueza. Ele nos restaura e nos renova continuamente.
ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ,
ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?
ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ.
ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?
ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು,
ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
ಯೆಹೂದ್ಯ ನಾಯಕರಿಗಾಗುವ ಶಿಕ್ಷೆ
ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ!
ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು;
ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.