Vaso
A metáfora do vaso é uma das mais belas da Bíblia. Assim como o oleiro molda o barro, Deus nos forma segundo seus propósitos, fazendo de nós vasos úteis para sua glória.
Nas mãos do oleiro
Deus é o Oleiro e nós somos o barro. Ele tem autoridade e sabedoria para nos moldar conforme sua vontade perfeita, e não devemos questionar sua obra.
ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ,
ನಾವು ಮಣ್ಣು. ನೀನು ನಮ್ಮ ಕುಂಬಾರನು.
ನಾವೆಲ್ಲರೂ ನಿನ್ನ ಕೈಕೆಲಸಗಳು.
ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ, "ನೀನು ಎದ್ದು ಕುಂಬಾರನ ಮನೆಗೆ ಇಳಿದು ಹೋಗು. ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೊಡುತ್ತೇನೆ," ಎಂದರು. ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು. ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು.
ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, "ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? "ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ " ಎಂದು ಪ್ರಶ್ನಿಸಬಹುದೋ? ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?
"ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ!
ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ?
ಮಣ್ಣು ಕುಂಬಾರನಿಗೆ,
‘ನೀನು ಏನು ಮಾಡುತ್ತೀ?’ ಎಂದೂ,
‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ
ಆ ಮಡಕೆ ಹೇಳುವುದುಂಟೇ?
ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು,
ಕುಂಬಾರನು ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು!
ಉಂಟುಮಾಡಿದವನಿಗೆ ಉಂಟುಮಾಡಿದ್ದು,
"ನೀನು ನನ್ನನ್ನು ಉಂಟುಮಾಡಲಿಲ್ಲ," ಎಂತಲೂ,
ಮಡಕೆ ಕುಂಬಾರನಿಗೆ,
"ನಿನಗೆ ಏನೂ ಗೊತ್ತಿಲ್ಲ," ಎಂತಲೂ ಹೇಳಬಹುದೇ?
Vasos para honra
O cristão é chamado a ser um vaso de honra, purificado e preparado para toda boa obra. Nosso valor está em quem nos formou e no que carregamos.
ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ. ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.
ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.
ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು,
ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!
Moldados pela graça
Mesmo quando nos sentimos frágeis e imperfeitos, o poder de Deus se aperfeiçoa em nossa fraqueza. Ele nos restaura e nos renova continuamente.
"ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು;
ಈಗ ನೀವೇ ನನಗೆ ವಿಮುಖರಾಗಿ ನನ್ನನ್ನು ತೆಗೆದುಹಾಕುವಿರಾ?
ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ.
ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?
ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು,
ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.
ಕುರುಬರೇ, ಗೋಳಿಟ್ಟು ಕೂಗಿರಿ.
ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ.
ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ.
ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.