Verdade
A verdade é um dos atributos centrais de Deus e um pilar da vida cristã. Jesus se declarou o caminho, a verdade e a vida. Viver na verdade é viver em liberdade e integridade.
Deus é a fonte da verdade
O Senhor é fiel e verdadeiro em todas as suas palavras. Sua Palavra é a verdade absoluta que ilumina nosso caminho e nos sustenta.
ಯೇಸು ಅವನಿಗೆ, "ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ಯೆಹೋವನ ವಚನವು ಯಥಾರ್ಥವಾದದ್ದು;
ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.
ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು,
ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
O Espírito da verdade
Jesus prometeu enviar o Espírito Santo, o Espírito da verdade, que nos guia, ensina e nos faz lembrar de tudo o que Cristo disse.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ" ಎಂದನು.
A verdade liberta
Jesus prometeu que conhecer a verdade nos torna livres. A mentira aprisiona, mas a verdade de Deus nos conduz à plenitude.
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, "ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು" ಎಂದು ಹೇಳಿದನು.
ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ,
ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.
ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು;
ನೀನೇ ನನ್ನನ್ನು ರಕ್ಷಿಸುವ ದೇವರು;
ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
Vivendo e falando a verdade
Somos chamados a falar a verdade em amor e a rejeitar toda forma de engano. A integridade nas palavras é marca do cristão.
ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.
ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
ಅವನು ಸಜ್ಜನನೂ, ನೀತಿವಂತನೂ,
ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
ಅವನು ಚಾಡಿಯನ್ನು ಹೇಳದವನೂ,
ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,
ಯಾರನ್ನೂ ನಿಂದಿಸದವನೂ ಆಗಿರಬೇಕು.
ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ;
ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
ಶಿಷ್ಟನ ತುಟಿಯಲ್ಲಿ ಹಿತವಚನ,
ದುಷ್ಟನ ಬಾಯಲ್ಲಿ ನೀಚವಚನ.
ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು,
ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.
ನಂಬಿಕೆಯ ಪ್ರಾರ್ಥನೆ ಕುರಿತದ್ದು
ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
ನಂಬಿಕೆಯ ಮಹತ್ವಕ್ಕೆ ದೃಷ್ಟಾಂತಗಳು
ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.