Vícios
A Bíblia nos alerta contra os vícios e comportamentos destrutivos. Deus nos chama à liberdade em Cristo, não à escravidão de desejos e hábitos que consomem corpo e alma.
A escravidão do pecado
Todo vício é uma forma de escravidão. Jesus veio para libertar os cativos e restaurar a verdadeira liberdade dos filhos de Deus.
ಅದಕ್ಕೆ ಯೇಸು, "ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, "ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು" ಎಂದು ಹೇಳಿದನು.
ಕ್ರೈಸ್ತ ಸ್ವಾತಂತ್ರ್ಯ
ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
Resistência e domínio próprio
O fruto do Espírito inclui o domínio próprio. O cristão é chamado a ter controle sobre seus desejos, resistir à tentação e vigiar contra as obras da carne.
ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ
"ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು," ಆದರೆ ಎಲ್ಲವು ಪ್ರಯೋಜನಕರವಲ್ಲ. "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು" ಆದರೆ ನಾನು ಯಾವುದಕ್ಕೂ ಅಧೀನನಲ್ಲ.
ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ
"ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು," ಆದರೆ ಎಲ್ಲವು ಪ್ರಯೋಜನಕರವಲ್ಲ. "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು" ಆದರೆ ನಾನು ಯಾವುದಕ್ಕೂ ಅಧೀನನಲ್ಲ.
ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ" ಎಂದು ಹೇಳಿದನು.
ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
Libertação e renovação
Em Cristo somos libertos de toda forma de dependência. Pela renovação da mente, aprendemos a discernir e rejeitar o que nos prende.
ದೇವಜನರು ನಡೆದುಕೊಳ್ಳಬೇಕಾದ ರೀತಿ
ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು
ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು. ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು. ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.
ದೇವರ ವರಗಳ ಒಳ್ಳೆಯ ನಿರ್ವಾಹಕನು
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು,
ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
O corpo como templo
Nosso corpo é templo do Espírito Santo. Devemos honrar a Deus com o corpo, fugindo da embriaguez, da imoralidade e de toda impureza.
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ,
ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.
ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
"ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
ನಮ್ಮನ್ನು ಶೋಧನೆಯೊಳಗೆ ಸೇರಿಸದೆ
ಕೆಡುಕನಿಂದ; ನಮ್ಮನ್ನು ತಪ್ಪಿಸು
ಪವಿತ್ರ ಶಾಸ್ತ್ರದಲ್ಲಿ: "ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ" ಎಂದು ಬರೆದಿದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.