Vícios
A Bíblia nos alerta contra os vícios e comportamentos destrutivos. Deus nos chama à liberdade em Cristo, não à escravidão de desejos e hábitos que consomem corpo e alma.
A escravidão do pecado
Todo vício é uma forma de escravidão. Jesus veio para libertar os cativos e restaurar a verdadeira liberdade dos filhos de Deus.
ಅದಕ್ಕೆ ಯೇಸು ಉತ್ತರವಾಗಿ, "ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.
ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.
ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.
ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, "ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು," ಎಂದು ಹೇಳಿದರು.
ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.
ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.
Resistência e domínio próprio
O fruto do Espírito inclui o domínio próprio. O cristão é chamado a ter controle sobre seus desejos, resistir à tentação e vigiar contra as obras da carne.
ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
"ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ" ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ.
"ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ" ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ.
ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.
ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.
ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ," ಎಂದು ಹೇಳಿದರು.
ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.
Libertação e renovação
Em Cristo somos libertos de toda forma de dependência. Pela renovação da mente, aprendemos a discernir e rejeitar o que nos prende.
ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು. ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ. ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ. ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.
ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು. ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.
ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು. ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ. ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. ಅಂಥವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕಾಗಿ ಸಿದ್ಧವಾಗಿರುವ ದೇವರಿಗೆ ಲೆಕ್ಕ ಕೊಡಬೇಕಾಗುವುದು. ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ.
ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
O corpo como templo
Nosso corpo é templo do Espírito Santo. Devemos honrar a Deus com o corpo, fugindo da embriaguez, da imoralidade e de toda impureza.
ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.
ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,
ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ;
ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.
ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು.
ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.
ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
"ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
ನಮ್ಮನ್ನು ಶೋಧನೆಗೆ ಸೇರಿಸದೆ,
ಕೇಡಿನಿಂದ ತಪ್ಪಿಸಿರಿ.
ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ
ಸದಾಕಾಲ ನಿಮ್ಮದೇ. ಆಮೆನ್.’
ಪವಿತ್ರ ವೇದದಲ್ಲಿ ಹೀಗೆ ಬರೆದಿದೆ:
" ‘ನಾನು ಜೀವಿಸುವುದರಿಂದ,
ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು.
ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’
ಎಂದು ಕರ್ತನು ಹೇಳುತ್ತಾರೆ."
ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.