Vida eterna
A vida eterna é a promessa central do evangelho. Não se trata apenas de duração infinita, mas de qualidade de vida em comunhão com Deus, começando aqui e se estendendo pela eternidade.
O dom gratuito da vida eterna
A vida eterna é um presente de Deus, não resultado de obras humanas. É dada gratuitamente a quem crê em Jesus Cristo.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.
ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.
ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.
ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.
ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು.
A certeza para quem crê
Quem está em Cristo tem a certeza de que passou da morte para a vida. Nada pode arrebatar o crente da mão de Deus.
"ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.
ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು," ಎಂದು ಹೇಳಿದನು.
ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು," ಎಂದು ಹೇಳಿದನು.
ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ. ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು," ಎಂದು ಹೇಳಿದರು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು. ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ," ಎಂದು ಉತ್ತರಕೊಟ್ಟರು.
ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ. ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.
ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.
ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.
O caminho para a eternidade
Jesus é o caminho para a vida eterna. Crer nele, segui-lo e perseverar na fé são os passos que nos conduzem à eternidade com Deus.
ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು," ಎಂದರು.
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ," ಎಂದರು.
ಆಗ ಅವರು ಯೇಸುವಿಗೆ, "ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?" ಎಂದು ಕೇಳಿದ್ದಕ್ಕೆ,
ಯೇಸು ಅವರಿಗೆ, "ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ," ಎಂದರು.
ಸೀಮೋನ್ ಪೇತ್ರನು ಯೇಸುವಿಗೆ, "ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.
"ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು. ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.
"ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು. ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.
ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.
"ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು," ಎಂದು ಹೇಳುವೆನು.
ಅದಕ್ಕೆ ಯೇಸು, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ, ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.
ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, "ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?" ಎಂದು ಕೇಳಿದನು.
ಯೇಸು ಅವನಿಗೆ, "ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?" ಎಂದು ಕೇಳಿದರು.
ಅದಕ್ಕೆ ಅವನು ಉತ್ತರವಾಗಿ, " ‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’" ಎಂದನು.
ಆಗ ಯೇಸು ಅವನಿಗೆ, "ನೀನು ಸರಿಯಾಗಿ ಉತ್ತರಕೊಟ್ಟೆ, ಅದರಂತೆಯೇ ಮಾಡು, ಆಗ ನೀನು ಬದುಕುವೆ," ಎಂದರು.
ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?
ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?
Perseverança e glória futura
A vida eterna exige perseverança. Os sofrimentos presentes não se comparam com a glória que será revelada. Deus nos guardará até o fim.
ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.
ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.
ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.
ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.
ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು.
ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.
ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.
ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.
ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ. ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
A eternidade com Deus
A Bíblia descreve a plenitude da vida eterna: sem dor, sem lágrimas, em perfeita comunhão com Deus para sempre.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು. ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.
"ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ," ಎಂದು ಕರ್ತದೇವರು ಹೇಳುತ್ತಾರೆ.
ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.
ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ;
ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು.
ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು;
ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.
ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ;
ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.
ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ,
ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.
ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು
ಯೆಹೋವ ದೇವರ ಕೃಪೆಯನ್ನು ಹೊಂದುವನು.
ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.