Vida nova
Em Cristo, toda pessoa é transformada em uma nova criação. O velho passa e tudo se faz novo. A vida nova é o resultado da obra redentora de Jesus em nosso coração.
Morte e ressurreição com Cristo
O batismo simboliza nossa morte para o pecado e ressurreição para uma nova vida. Fomos sepultados com Cristo e ressuscitamos com Ele.
ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ? ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.
ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು. ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು. ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ.
ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.
Nova criação
Quando aceitamos Jesus, nascemos de novo. A velha natureza dá lugar a uma identidade renovada pelo Espírito Santo.
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.
ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.
ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.
Despir o velho, vestir o novo
A vida nova se manifesta em abandonar os velhos hábitos e revestir-se do novo homem, criado segundo a vontade de Deus.
ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು. ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು; ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.
ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ, ನಿಮ್ಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ! ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
Renovação interior
Deus promete dar um coração novo e um espírito novo. A transformação nasce do arrependimento e da purificação divina.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ;
ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.
ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ;
ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.
ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು. ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು. ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.