Vitória
A vitória do cristão não depende de suas próprias forças, mas do poder de Deus que opera em nós. As Escrituras declaram que somos mais que vencedores por meio daquele que nos amou.
A vitória vem de Deus
O Senhor luta por nós. Quando confiamos nele, nenhuma arma forjada contra nós prosperará e nenhum inimigo prevalecerá.
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು" ಎಂದು ಹೇಳಬೇಕು.
ಯೆಹೋವನು ಯೆಹೋಶುವನಿಗೆ, ಅವರಿಗೆ "ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ" ಎಂದನು
ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ
ಜಯವು ಯೆಹೋವನಿಂದಲೇ.
ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ;
ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು;
ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
ದೇವರೇ, ನೀನೇ ನನ್ನ ಅರಸನು;
ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
Mais que vencedores
Em todas as circunstâncias, a fé nos dá a vitória. O mundo tenta nos derrubar, mas Cristo já venceu o mundo e nos faz triunfar.
ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
"ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?" ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
Força para a batalha
Deus nos reveste com sua armadura espiritual, nos fortalece e nos encoraja. Mesmo que o justo caia sete vezes, ele se levanta.
ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು,
ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು;
ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
ನಿನ್ನ ಮಗ್ಗುಲಲ್ಲಿ ಸಾವಿರ ಜನರು,
ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.