Vitória
A vitória do cristão não depende de suas próprias forças, mas do poder de Deus que opera em nós. As Escrituras declaram que somos mais que vencedores por meio daquele que nos amou.
A vitória vem de Deus
O Senhor luta por nós. Quando confiamos nele, nenhuma arma forjada contra nós prosperará e nenhum inimigo prevalecerá.
ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ," ಎಂದು ಹೇಳಬೇಕು.
ಯೆಹೋವ ದೇವರು ಯೆಹೋಶುವನಿಗೆ, "ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ," ಎಂದರು.
ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ;
ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.
ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ;
ಅವರ ತೋಳು ಅವರಿಗೆ ಜಯ ತರಲಿಲ್ಲ;
ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು.
ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.
ನೀವೇ ನನ್ನ ಅರಸರೂ ದೇವರೂ ಆಗಿದ್ದೀರಿ.
ಯಾಕೋಬಿಗೆ ಜಯವನ್ನು ಆಜ್ಞಾಪಿಸುವ ದೇವರಾಗಿದ್ದೀರಿ.
Mais que vencedores
Em todas as circunstâncias, a fé nos dá a vitória. O mundo tenta nos derrubar, mas Cristo já venceu o mundo e nos faz triunfar.
ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.
ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ. ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.
ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?
"ಓ ಮರಣವೇ, ನಿನ್ನ ಜಯವು ಎಲ್ಲಿ?
ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?"
ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ. ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
Força para a batalha
Deus nos reveste com sua armadura espiritual, nos fortalece e nos encoraja. Mesmo que o justo caia sete vezes, ele se levanta.
ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ;
ಆದರೆ ದುಷ್ಟನು ಕೇಡು ಬಂದಾಗ ಬೀಳುವನು.
ದೇವರಿಂದ ನಾವು ಜಯ ಹೊಂದುವೆವು.
ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.
ನಿಮ್ಮ ಪಕ್ಕದಲ್ಲಿ ಸಾವಿರ ಜನರು ಬಿದ್ದರೂ
ನಿಮ್ಮ ಬಲಗಡೆಯಲ್ಲಿ ಹತ್ತು ಸಾವಿರ ಜನರು ಬಿದ್ದಾಗ್ಯೂ,
ನಿಮ್ಮ ಸಮೀಪಕ್ಕೆ ಅದು ಬರುವುದಿಲ್ಲ.
ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.