A volta de Jesus
A volta de Jesus é uma das maiores promessas da Bíblia. Cristo prometeu que retornará em glória, e os cristãos vivem na expectativa desse dia triunfante.
A promessa do retorno
Jesus prometeu aos discípulos que voltaria. Os anjos confirmaram essa promessa na ascensão, e os apóstolos ensinaram que Ele virá com poder.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. "ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು" ಎಂದು ಹೇಳಿದರು.
ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, "ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!" ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.
"ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
Os sinais e o momento
Ninguém sabe o dia nem a hora. Jesus alertou sobre falsos sinais e nos chamou à vigilância constante, pois Ele virá como ladrão na noite.
"ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು, ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು. ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು. ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
"ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ. ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. "ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು" ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
"ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ. ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
A glória da segunda vinda
Cristo voltará nas nuvens, com poder e grande glória. Os mortos em Cristo ressuscitarão, e os vivos serão arrebatados para encontrá-lo nos ares.
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ;
"‘ಸೂರ್ಯನು ಕತ್ತಲಾಗಿ ಹೋಗುವನು.
ಚಂದ್ರನು ತನ್ನ ಬೆಳಕು ಕೊಡದೆ ಇರುವನು.
ನಕ್ಷತ್ರಗಳು ಆಕಾಶದಿಂದ ಬೀಳುವವು.
ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು. ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು."
"ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು. ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು. ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು. ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ "ರಾಜಾಧಿರಾಜನೂ ಕರ್ತಾಧಿ ಕರ್ತನೂ" ಎಂಬ ಹೆಸರು ಬರೆದಿದೆ.
ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.
Vivendo na expectativa
A certeza do retorno de Cristo nos chama a viver em santidade, aguardando novos céus e nova terra onde habita a justiça.
ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ, ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.