ಕರ್ತನ ಭೋಜನವನ್ನು ಕ್ರಮತಪ್ಪಿ ಆಚರಿಸಿದ್ದನ್ನು ಕುರಿತದ್ದು
17 ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ. 18 ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ 11:18 1 ಕೊರಿ 1:10-12; 3:3ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.