24 "ಇದು 11:24 ಅಥವಾ, ನಿಮಗೋಸ್ಕರ ಮುರಿಯಲ್ಪಡುವನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ 11:24 ಅಥವಾ, ಮುರಿದು ತಿನ್ನಿರಿಹೀಗೆ ಮಾಡಿರಿ" ಅಂದನು. 25 ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, 11:25 ಅಥವಾ ಪಾತ್ರೆಯಲ್ಲಿರುವುದು"ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ" ಅಂದನು. 26 ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು 11:26 ಯೋಹಾ 21:22ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. 27 ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು 11:27 ಯೋಹಾ 6:51, 53-56ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು. 28 ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.
Publicidade