ಕ್ರೈಸ್ತರು ಕ್ರೈಸ್ತರಲ್ಲದವರ ಮುಂದೆ ವ್ಯಾಜ್ಯವಾಡಿದ್ದನ್ನು ಕುರಿತದ್ದು
1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ 6:1 ಮತ್ತಾ 18:17ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ? 2 6:2 ದಾನಿ. 7:22; ಮತ್ತಾ 19:28ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ? 3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ? 4 ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ? 5 ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?