12 ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು. 13 ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು. 14 ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.
Publicidade
1 ಕೊರಿಂಥದವರಿಗೆ 7
Estes versículos te tocaram? Ore agora!
+581 estão orando agora.
Junte-se à corrente de oração.