32 ಆದರೆ 7:32 ಮತ್ತಾ 6:25; ಲೂಕ 10:41ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. 33 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ. 34 ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ.
Publicidade
1 ಕೊರಿಂಥದವರಿಗೆ 7
Estes versículos te tocaram? Ore agora!
+581 estão orando agora.
Junte-se à corrente de oração.