8 ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು. 9 ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ. 10 ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ 7:10 1 ಕೊರಿ 7:6ಕರ್ತನ ಆಜ್ಞೆಯು ಏನೆಂದರೆ, 7:10 ಮತ್ತಾ 5:32; ಮಾರ್ಕ 10:9ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. 11 ಒಂದು ವೇಳೆ ಅಗಲಿದರೂ 7:11 ಮಾರ್ಕ 10:12ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.
Publicidade