ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ
12 ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ 2:12 ಲೂಕ 24:47; ಅ. ಕೃ. 10:43; 13:38:ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. 13 ತಂದೆಗಳಿರಾ, 2:13 ಯೋಹಾ 1:1; 1 ಯೋಹಾ 1:1:ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು 2:13 ಮತ್ತಾ 5:37; 6:13; 13:19; ಯೋಹಾ 17:15; ಎಫೆ 6:16; 2 ಥೆಸ. 3:3; 1 ಯೋಹಾ 3:12; 5:18, 19:ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, 2:13 ಯೋಹಾ 14:7-9:ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. 14 ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು 2:14 ಎಫೆ 6:10; 1 ಯೋಹಾ 5:4, 5:ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು
15 2:15 ರೋಮಾ. 12:2; 2 ತಿಮೊ. 4:10: ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. 2:15 ಯಾಕೋಬ 4:4:ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.