15 3:15 ಮತ್ತಾ 5:21, 22:ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು 3:15 ಗಲಾ. 5:21; ಪ್ರಕ 21:8:ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. 16 3:16 ಯೋಹಾ 10:11; 15:13; ರೋಮಾ. 5:7, 8; ಎಫೆ 5:2; ಮತ್ತಾ 20:28; 1 ತಿಮೊ. 2:6:ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. 3:16 ಫಿಲಿ. 2:17:ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.