15 ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. 16 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.