16 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. 17 ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ. 18 ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ 4:18 ಶಿಕ್ಷೆಯ ಭಯವಿರುತ್ತದೆ. ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. 4:18 ಅಥವಾ, ಭಯಪಡುವವನುಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.