ದೇವರಿಂದ ಹುಟ್ಟಿದವರಲ್ಲಿ ಪ್ರೀತಿಸ್ವಭಾವವೇ ವಿಶೇಷ
7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. 8 ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.