9 ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. 10 ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.