3 ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ. 4 ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. 5 ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
Publicidade
Publicidade