ಪರಿಶುದ್ಧ ಜೀವಿತಕ್ಕೆ ಆಹ್ವಾನ
13 ಆದ್ದರಿಂದ 1:13 ಲೂಕ 12:35; ಎಫೆ 6:14:ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, 1:13 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5:ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ. 14 ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, 1:14 ಅ. ಕೃ. 17:30. ನೀವು ಮೊದಲು ಅಜ್ಞಾನಿಗಳಾಗಿದ್ದಾಗ 1:14 ರೋಮಾ. 12:2; ತೀತ. 3:3:ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,