15 ಅದಕ್ಕೆ ಹನ್ನಳು "ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ. 16 ನಿನ್ನ ದಾಸಿಯಾದ ನನ್ನನ್ನು 1:16 1 ಅರಸು 21:10.ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು" ಎಂದು ಹೇಳಿದಳು.