11 ಸೌಲನು ಕೂಡಲೇ ದೂತರನ್ನು ಕರಿಸಿ 19:11 ಕೀರ್ತ 59.ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, "ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ" ಎಂದು ಹೇಳಿ 12 19:12 ಅ.ಕೃ. 9:25.ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು. 13 ಅನಂತರ ಆಕೆಯು ಮನೆಯಲ್ಲಿದ್ದ 19:13 ಆದಿ 31:19.ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು. 14 ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು. 15 ಸೌಲನು ತಿರುಗಿ ತನ್ನ ಆಳುಗಳನ್ನು, "ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ" ಎಂದು ಆಜ್ಞಾಪಿಸಿದನು. 16 ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು. 17 ಆಗ ಸೌಲನು ಮೀಕಲಳಿಗೆ, "ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ" ಎನ್ನಲು ಆಕೆಯು ಅವನಿಗೆ, "ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು" ಅಂದಳು.
ದಾವೀದನು ಸಮುವೇಲನ ಬಳಿಗೆ ಬಂದದ್ದು
18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.